ಕ್ರೈಂ

ವಾಲಿಬಾಲ್‌ ಆಡುತ್ತಿದ್ದಾಗ ಮೈದಾನದಲ್ಲೇ ಕುಸಿದು ಯುವಕ ದುರಂತ ಅಂತ್ಯ

420

ನ್ಯೂಸ್‌ನಾಟೌಟ್‌: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ಶನಿವಾರ ಸಂಜೆ (ಫೆ.25) ನಡೆದಿದೆ.

ಮೃತ ಯುವಕನನ್ನು ಸಂತೋಷ (34) ಎಂದು ಗುರುತಿಸಲಾಗಿದೆ. ಯುವಕ ಕಳೆದ 4 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್‌ ಆಡುತ್ತಿರುವಾಗ ಮೈದಾನದಲ್ಲಿ ಸಂತೋಷ್‌ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಸುಳ್ಯ:ಲಾರಿ ಮತ್ತು ಬೈಕ್ ನಡುವೆ ಅಪಘಾತ;ಸವಾರನಿಗೆ ಗಾಯ,ಬೈಕ್ ಜಖಂ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget