ಕ್ರೈಂರಾಜ್ಯವೈರಲ್ ನ್ಯೂಸ್ಸಿನಿಮಾ

Yuvarajkumar Divorce: ದೊಡ್ಮನೆಗೂ ತಟ್ಟಿದ ಡಿವೋರ್ಸ್‌ ಪಿಡುಗು..! ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಡಿವೋರ್ಸ್ ನೋಟಿಸ್ ಕಳುಹಿಸಿದ ಯುವರಾಜ್‌ ಕುಮಾರ್..!

249

ನ್ಯೂಸ್ ನಾಟೌಟ್: ಬಿಗ್ ಬಾಸ್ ಖ್ಯಾತಿಯ ಜೋಡಿ ಚಂದನ್ ಮತ್ತು ನಿವೇದಿತಾ ಡಿವೋರ್ಸ್ ಕೇಸ್ ಬೆನ್ನಲ್ಲೇ ದೊಡ್ಮನೆಯ ಡಿವೋರ್ಸ್ ಕೇಸ್ ಸುದ್ದಿಯಾಗುತ್ತಿದೆ. ನಟ ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ಯುವರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕಾಗಿದೆ. ಪತ್ನಿ ಶ್ರೀದೇವಿಗೆ ಡಿವೋರ್ಸ್ ನೀಡಲು ಜೂನ್ 6ರಂದು ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ಗೆ ಯುವ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ಪತ್ನಿ ಶ್ರೀದೇವಿಗೆ ಕೋರ್ಟ್‌ನಿಂದ ಈಗಾಗಲೇ ಡಿವೋರ್ಸ್ ನೋಟಿಸ್ ಕೂಡ ಕಳುಹಿಸಲಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಜೂನ್ 6ರಂದು ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಯುವರಾಜ್‌ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ. ಕಳೆದ 6 ತಿಂಗಳಿಂದ ಇಬ್ಬರ ಡಿವೋರ್ಸ್ ಸುದ್ದಿ ಹರಿದಾಡುತ್ತಿತ್ತು.

ಕೆಲ ತಿಂಗಳುಗಳಿಂದ ಇಬ್ಬರೂ ಜೊತೆಯಾಗಿ ಕೂಡ ವಾಸಿಸುತ್ತಿಲ್ಲ. ಇನ್ನೂ ‘ಯುವ’ ಸಿನಿಮಾದ ಪ್ರಚಾರ ಕಾರ್ಯದಲ್ಲಿಯೂ ಕೂಡ ಶ್ರೀದೇವಿ ಭಾಗಿಯಾಗಿರಲಿಲ್ಲ. ಸದ್ಯ ಶ್ರೀದೇವಿ ವಿದೇಶದಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ. 2019ರ ಮೇ 26 ರಂದು ಅದ್ಧೂರಿಯಾಗಿ ಇಬ್ಬರ ಮದುವೆ ನಡೆದಿತ್ತು. ಈಗ ಇಬ್ಬರೂ ಡಿವೋರ್ಸ್‌ಗೆ ಮುಂದಾಗಿದ್ದಾರೆ ಎನ್ನಲಾಗಿದೆ.

Click 👇

https://newsnotout.com/2024/06/bus-pm-oath-kannada-news-jammu-and-kashmir
https://newsnotout.com/2024/06/yuvarajkumar-divorce-case-in-rajkumar-family
See also  ಬಿರುಗಾಳಿಗೆ ಮಗುಚಿದ ದೋಣಿ..! ಪುಟ್ಟ ಮಕ್ಕಳು ಸೇರಿ 6 ಮಂದಿ ಜಲಸಮಾಧಿ..! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget