ಕ್ರೈಂರಾಜ್ಯವೈರಲ್ ನ್ಯೂಸ್ಸಿನಿಮಾ

ಯುವರಾಜ್ ಕುಮಾರ್ ಸಲ್ಲಿಸಿದ್ದ ಡಿವೋರ್ಸ್‌ ಕೇಸ್‌ ಮುಂದೂಡಿಕೆ..! ಪತ್ನಿ ಶ್ರೀದೇವಿ ಭೈರಪ್ಪರಿಂದ ಆಕ್ಷೇಪ..! ಇಲ್ಲಿದೆ ಸಂಪೂರ್ಣ ಮಾಹಿತಿ

258

ನ್ಯೂಸ್ ನಾಟೌಟ್: ದೊಡ್ಮನೆಯ ಕುಡಿ, ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ (Yuva Rajkumar) ಸಲ್ಲಿಸಿದ್ದ ವಿಚ್ಚೇದನ (Divorce) ಅರ್ಜಿ ವಿಚಾರಣೆ ಆಗಸ್ಟ್‌ 23ಕ್ಕೆ ಮುಂದೂಡಿಕೆಯಾಗಿದೆ.

ಇಂದು ಜುಲೈ1 ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಅವರಿದ್ಧ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಿಚ್ಚೇದನ ಅರ್ಜಿಗೆ ಯುವ ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು. ಈ ಮನವಿಗೆ ನ್ಯಾಯಾಧೀಶರು, ಇದು ಕೌಟುಂಬಿಕ ಕಲಹವಾಗಿರುವ ಕಾರಣ ಮಿಡಿಯೇಷನ್ ಕೌನ್ಸಿಲಿಂಗ್ ಮುಕ್ತಾಯವಾಗಲಿ. ಮೊದಲು ಕೌನ್ಸಿಲಿಂಗ್‌ ಮುಕ್ತಾಯವಾಗಬೇಕು.

ಕೌನ್ಸಿಲಿಂಗ್‌ ಮುಕ್ತಾಯದ ಬಳಿಕ ಇಬ್ಬರ ತೀರ್ಮಾನ ಕೇಳಬೇಕು. ಬಳಿಕ ವಿಚ್ಚೇದನದ ಆಕ್ಷೇಪಣೆ ಕೇಳುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ. ಅಂತಿಮವಾಗಿ ಕೋರ್ಟ್‌ ಆಗಸ್ಟ್ 23ಕ್ಕೆ ಮಿಡಿಯೇಷನ್ ದಿನಾಂಕ ನಿಗದಿ ಮಾಡಿ ವಿಚಾರಣೆ ಮುಂದೂಡಿತು.

Click 👇

https://newsnotout.com/2024/07/team-india-kannada-news-world-t20-kannada-news-today-grand-entry
See also  ಧಾರವಾಡದಲ್ಲೂ ವಿದ್ಯಾರ್ಥಿಯ ಜನಿವಾರಕ್ಕೆ ಕತ್ತರಿ ಪ್ರಯೋಗ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget