ನ್ಯೂಸ್ ನಾಟೌಟ್: ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಭಾಂಗಣದಲ್ಲಿ ಯುವ ಸಪ್ತಾಹ ಕಾರ್ಯಕ್ರಮ ಗುರುವಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ಪ್ರತಿಮೆ ಸಮಿತಿ ಕಾರ್ಯದರ್ಶಿ ರಾಜೇಶ್ ರೈ ಮೇನಾಲ ಮಾತನಾಡಿ, ವಿವಿಧೆತೆಯಲ್ಲಿ ಏಕತೆಯನ್ನು ಸಾರಿದ ದೇಶ ನಮ್ಮ ಭಾರತ, ಇಲ್ಲಿನ ಸಂಸ್ಕೃತಿ, ಆಚಾರ ವಿಚಾರಗಳು ಇತರ ದೇಶಕ್ಕೆ ಮಾದರಿಯಾಗಿದೆ. ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ನಮ್ಮ ಜೀವನಲ್ಲಿ ಅಳವಡಿಸಿಕೊಂಡಾಗ ಜೀವನ ಆದರ್ಶವಾಗುತ್ತದೆ ಎಂದರು.
ಮೆಡಿಕಲ್ ವಿದ್ಯಾರ್ಥಿಗಳಾದ ಧೃತಿ ಜಿ. ದಂಡೂರು ಮತ್ತು ಗೋಕುಲ್ ನಂಬಿಯಾರ್ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ನೀಲಾಂಬಿಕೈ ನಟರಾಜನ್ ಮತ್ತು ಮೆಡಿಕಲ್ ಕಾಲೇಜು ವೈದ್ಯರು ಮತ್ತು ವೈದ್ಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.