ಕ್ರೈಂ

ಜಾತಿ ನಿಂದನೆ ಪ್ರಕರಣ: ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅರೆಸ್ಟ್

550
Spread the love

ನವದೆಹಲಿ: ಜಾತಿ ನಿಂದನೆ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ.

ಕಳೆದ ವರ್ಷ ರೋಹಿತ್ ಶರ್ಮಾ ಜೊತೆಗಿನ ಸಂವಾದದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಯುವಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಆ ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಲವು ದಿನಗಳ ಹಿಂದೆ ಯುವರಾಜ್ ಸಿಂಗ್ ಹೈಕೋರ್ಟ್​​ಗೆ ನಿರೀಕ್ಷಣಾ ಜಾಮೀನಿಗೆ ಮನವಿ ಸಲ್ಲಿಸಿದ್ದರು. ಈ ಕಾರಣದಿಂದಾಗಿ, ಹಂಸಿ ಪೊಲೀಸರು ಆತನನ್ನು ಔಪಚಾರಿಕವಾಗಿ ಬಂಧಿಸಿ 3 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಆ ಬಳಿಕ ನಿರೀಕ್ಷಣಾ ಜಾಮೀನು ಪತ್ರಗಳ ಆಧಾರದ ಮೇಲೆ ಬಿಡುಗಡೆ ಮಾಡಿದ್ದಾರೆ.

See also  ಆಂಟಿ ಎಂದಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್ ಗೆ ಚಪ್ಪಲಿಯಲ್ಲಿ ಬಾರಿಸಿದ ಮಹಿಳೆ..! ಅಷ್ಟಕ್ಕೂ ನಿನ್ನನ್ನು ಜೀವಂತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದೇಕೆ ಆಕೆ? ಪೊಲೀಸರಿಗೆ ನೀಡಿದ ದೂರಿನಲ್ಲೇನಿದೆ?
  Ad Widget   Ad Widget   Ad Widget   Ad Widget   Ad Widget   Ad Widget