ನ್ಯೂಸ್ ನಾಟೌಟ್: ಚೀನಾದ ಮೃಗಾಲಯವೊಂದು ಝೀಬ್ರಾದಂತೆ ಕಾಣಲು ಕತ್ತೆಗಳಿಗೆ ಕಪ್ಪು ಮತ್ತು ಬಿಳಿ ಬಣ್ಣಗಳನ್ನು ಬಳಿದ ಘಟನೆ ನಡೆದಿದೆ. ಈ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ ತಮಾಷೆಗಾಗಿ ಮಾಡಲಾಗಿದೆ ಎಂದು ಮೃಗಾಲಯದ ಪ್ರತಿನಿಧಿಗಳು ಪ್ರತಿಕ್ರಿಯಿಸಿದ್ದಾರೆ.
ಚೀನಾದ ಶಾಂಡೊಂಗ್ ಪ್ರಾಂತ್ಯದ ಝಿಬೋ ಸಿಟಿಯಲ್ಲಿರುವ ಮೃಗಾಲಯ, ಹೆಚ್ಚಿನ ಸಂದರ್ಶಕರನ್ನು ಆಕರ್ಷಿಸುವ ಪ್ರಯತ್ನದ ಭಾಗವಾಗಿ ಕತ್ತೆಗಳಿಗೆ ಕಪ್ಪು ಮತ್ತು ಬಿಳಿ ಬಣ್ಣಗಳನ್ನು ಬಳಿದು ಝೀಬ್ರಾದಂತೆ ಮಾಡಿದೆ. ಈ ಕುರಿತು ಅಸಲಿಯತ್ತು ಬಯಲಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಮೃಗಾಲಯದ ಪ್ರತಿನಿಧಿಗಳು, ಪ್ರಾಣಿಗಳ ಮೇಲೆ ಬಳಸಿದ ಬಣ್ಣವು ವಿಷಕಾರಿಯಲ್ಲ, ಮಾಲಕರು ಇದನ್ನು ತಮಾಷೆಗಾಗಿ ಮಾಡಿದ್ದಾರೆ ಎಂದಿದ್ದಾರೆ.ಪ್ರಾಣಿ ಪ್ರೇಮಿಗಳು ಇಂತಹ ಕ್ರಮಗಳನ್ನು ಬಲವಾಗಿ ಖಂಡಿಸಿದ್ದಾರೆ.
Click 👇🏻
ಸಿಎಂ ಕಚೇರಿಯ ‘ಕಚೇರಿ ಟಿಪ್ಪಣಿ’ ನಕಲು ಪ್ರಕರಣ..! ಹಲವಾರು ಎಂ.ಎಲ್.ಎಗಳ ಬಳಿ ಪಿಎ ಆಗಿದ್ದವ ಅರೆಸ್ಟ್..!
ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಕುಂಭಮೇಳಕ್ಕೆ ಹೊರಟಿದ್ದ 18 ಭಕ್ತರು ಸಾವು..! ಮೋದಿ ಸಂತಾಪ
ಅಮೆರಿಕದಿಂದ ಭಾರತೀಯರ 2 ಹಂತದ ಗಡಿಪಾರು..! ಅಮೃತಸರದಲ್ಲಿ ಬಂದಿಳಿದ 119 ಮಂದಿ..!
ನಾಣ್ಯಗಳಿಂದ ಕಾರನ್ನು ಅಲಂಕರಿಸಿದ ರಾಜಸ್ತಾನಿ ವ್ಯಕ್ತಿ..! ವಿಡಿಯೋ ವೈರಲ್
ನಟ ದರ್ಶನ್ ಹುಟ್ಟುಹಬ್ಬದ ದಿನವೇ ಅಭಿಮಾನಿಗಳು ಹಾಕಿದ್ದ ಬ್ಯಾನರ್ ಕಿತ್ತೆಸೆದ ಪುರಸಭೆ ಸಿಬ್ಬಂದಿ..! ಇಲ್ಲಿದೆ ಕಾರಣ
ಕುಂಭಮೇಳದಲ್ಲಿ ಸನ್ಯಾಸಿ ವೇಷ ತೊಟ್ಟು ತಲೆ ಮರೆಸಿಕೊಂಡಿದ್ದ ಆರೋಪಿ..! ಆತನನ್ನು ಹಿಡಿಯಲು ಸನ್ಯಾಸಿಗಳಾದ ಪೊಲೀಸರು..!